ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತಿಗಳ ಕೈವಾಡಕ್ಕೆ ಮತ್ತಷ್ಟು ಸಾಕ್ಷಿಗಳನ್ನು ಮಾಧ್ಯಮಗಳೇ ಬೆತ್ತಲು ಮಾಡುತ್ತೀವೆ.ನಾವು ಇಂತಹ ಜಾಗದಲ್ಲಿ ನಿವೇಶನ ಕೊಡಿ ಎಂದು ಅರ್ಜಿ ಹಾಕಿರಲಿಲ್ಲ ಎಂದು ಸುಳ್ಳು ಸಮರ್ಥನೆ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯನವರೇ ಹೀಗೇನು ಹೇಳುತ್ತೀರಿ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇಂತಹದ್ದೆ ಜಾಗದಲಿ ಸೈಟು ಕೊಡುವಂತೆ ನಿಮ್ಮಧರ್ಮಪತ್ನಿ ಪಾರ್ವತಿ ಅವರೇ ಮುಡಾ ಪ್ರಾಧಿಕಾರಕ್ಕೆ ಬರೆದಿರುವ ಪತ್ವೇ ಪ್ರತ್ಯಕ್ಷ ಸಾಕ್ಷಿಯಾಗಿ ನಿಂತಿದೆ.  ಪತ್ರದಲ್ಲಿ ಯಾವ ಸ್ಥಳದಲ್ಲಿ ಎಂದು ಬರೆದಿರುವ ಜಾಗಕ್ಕೆ ವೈಟ್‌ನರ್‌ ಹಾಕಿದವರು ಯಾರು? ಇದು ಅಭಿವೃದ್ದಿ ಹೊಂದಿದ ಬಡಾವಣೆಯಲ್ಲಿ ನೀವು ನಿವೇಶನ ಕಬಳಿಸಲು ಹಾಗೂ ನಿಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಮಾಡಿರುವ ಷಡ್ಯಂತ್ರ ಅಲ್ಲವೇ ಸಿದ್ದರಾಮಯ್ಯನವರೇ..?

Leave a Reply

Your email address will not be published. Required fields are marked *