ಬೆಂಗಳೂರು: 125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ ಮಳೆ ಬಿದ್ದಿದೆ. ಮಳೆ ಹೆಚ್ಚಾಗಿದೆ,.ನಾವೇನು ಮಾಡುವುದು ಎಂದು ಜವಾಬ್ದಾರಿಯಿಂದ ಹಿಂದೆ ಸರಿಯುವುದಿಲ್ಲ.ಈ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ.ಈ ಭಾಗದ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.ರಕ್ಷಣಾ ಕಾರ್ಯಗಳು ನಡೆಯುತ್ತಿವೆ.
ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ದಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ತೆರವು ಮಾಡಿಸಬೇಕೆಂದು ಹಿಂದೆ ಸಿಎಂ ಆಗಿದ್ದಾಗಲೂ ಸೂಚನೆ ನೀಡಿದ್ದೆ, ಈಗಲೂ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತಗೊಂಡು ಹಲವು ಕಾರ್ಮಿಕರು ಸಾವಿಗೀಡಅದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯಲ್ಲಿ ಮಡಿದವರ ಕುಟುಂಬಕ್ಕೆ ಸಾಂತ್ವನ ನೀಡಿದ್ದಾರೆ.