ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿಯನ್ನು ನೀಡಿರುವ ಜೆಡಿಎಸ್ ಮಾಜಿ ಸಂಸದನಾಗಿರುವ ಪ್ರಜ್ವಲ್ ರೇವಣ್ಣನಿಗೆ ಜೈಲೇ ಗತಿ ಎಂದು ತಿಳಿದುಬಂದಿದೆ.
ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ವಿಚಾರಣೆಯನ್ನು ಮಾಡಿದ ಜನಪ್ರತಿನಿಧಿಗಳ ವಿಷೇಶ ನ್ಯಾಯಾಲಯವೂ ಇಂದು ಜಾಮೀನು ಅರ್ಜಿಯನ್ನು ವಜಾ ಮಾಡಿರುವ ಹಿನ್ನೆಲೆ ಪ್ರಜ್ವಲ್‌ಗೆ ಜೈಲು ವಾಸವೇ ಖಾಯಂ ಆಗಿದೆ ಎನ್ನಲಾಗಿದೆ.
ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿ ಪ್ರಜ್ವಲ್ ರೇವಣ್ಣನ ವಿರುದ್ದ ಹಾಸನ ಜಿಲ್ಲೆಯ ಹೊಳೆನರಸೀಪುರದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.