ಬೆಂಗಳೂರು: ಬಿಜೆಪಿ ಪಕ್ಷದ 8 ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬ ಸ್ಪೋಟಕ ಹೇಳಿಕೆಯನ್ನು ಶಾಸಕ ಎಸ್.ಟಿ. ಸೋಮಶೇಖರ್ ನೀಡಿರುವುದು ತಿಳಿದುಬಂದಿದೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ನಗರದ ಇಬ್ಬರು ಶಾಸಕರನ್ನೊಳಗೊಂಡಂತೆ ಎಂಟು ಜನರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂದು ತಿಳಿಸಿದ್ದಾರೆ.
ಚನ್ನಪಟ್ಟಣ ವಿದಾನಸಭಾ ಚುನಾವಣೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಜೆಪಿ-ಜೆಡಿಎಸ್ ಚರ್ಚೆ ನಡೆಸಿ ಇವೆರಡೂ ಪಕ್ಷಗಳ ಮೈತ್ರಿಯ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರ ಹೆಸರನ್ನು ಘೋಷಿಸುವ ಮೂಲಕ ಸಿಪಿ ಯೋಗೇಶ್ವರ್‌ಗೆ ಟಕ್ಕರ್ ಕೊಡಲು ಟೊಂಕ ಕಟ್ಟಿ ನಿಂತಿರುವುದು ಎಲ್ಲರಲ್ಲೂ ಕುತೂಹಲವನ್ನು ಮೂಡಿಸಿದೆ.