ಬೆಂಗಳೂರು : ಬಿಜೆಪಿ ಪಕ್ಷದಲ್ಲಿ ಬಿ.ಎಸ್. ಯಡಿಯೂರಪ್ಪನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದವರು ಪೇಶ್ವೆ ವಂಶಸ್ಥರು ಎಂಬ ಹೊಸ ವಿವಾದವನ್ನು ಸೃಷ್ಟಿಮಾಡಿದ್ದಾರೆ  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಕಷ್ಟಪಟ್ಟು ಮುಖ್ಯಮಂತ್ರಿಯಾಗಿದ್ದರೂ ಅವರನ್ನು ಪಕ್ಷದವರು  ಸರಿಯಾಗಿ ನಡೆಸಿಕೊಂಡಿಲ್ಲ ಅವರನ್ನು ಹೇಗೆಲ್ಲಾ ನಡೆಸಿಕೊಳ್ಳುತ್ತಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಪ್ರಹ್ಲಾದ್‌ ಜೋಶಿಯ ಹೆಸರನ್ನು ಹೇಳದೇ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಕ್ಷ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದಾಗ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಎಲ್ಲರೂ ಸಹಮತಿಸಿದ್ದೇವು. ಆದರೆ ಪೇಶ್ವೇಯ ಡಿಎನ್‌ಎಯವರೇ ಬಿ.ಎಸ್.ವೈಯನ್ನು ಸರ್ಕಾರದಿಂದ ತೆಗೆದಿದ್ದಾರೆ .

Leave a Reply

Your email address will not be published. Required fields are marked *