ಬೆಂಗಳೂರು (17-02-2023): ಇಂದು ಸಿಎಂ ಮಂಡಿಸಿದ ರಾಜ್ಯ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರಿಗೆ ಮತ್ತು ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಬಂಪರ್ ಕೊಡುಗೆ ಘೋಷಣೆಯಾಗಿದೆ.
ಇತ್ತೀಚಿಗೆ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಅವರನ್ನು ಸಮಾಧಾನಿಸುವ ನಿಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ ಮಾಸಿಕ 1000₹ ಹೆಚ್ಚಳ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಿದೆ.
ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರು, ಕಾರ್ಯಕರ್ತೆಯರು, ಹಾಗೂ ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ. ದಂತೆ ಹೆಚ್ಚಿಸಲು ಸರ್ಕಾರ ನಿರ್ಧರಿಸಲಾಗಿದೆ.