ದೇವನಹಳ್ಳಿ: ದಾಬಸ್ ಪೇಟೆಯಿಂದ ತಮಿಳುನಾಡಿನ ಹೊಸೂರಿಗೆ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಾಷ್ಟ್ರೀಯ ಹೆದ್ದಾರಿ 207 ರಸ್ತೆ, ಸರ್ವೀಸ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕೆಲಸ ಅಸಮರ್ಪಕ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಮಾಡಿರುವುದರಿಂದ, ಮಳೆ ಬಂದಾಗ ಸರ್ವೀಸ್ ರಸ್ತೆಗಳಲ್ಲಿ ನೀರು ತುಂಬಿಕೊಂಡು ದಿನನಿತ್ಯ ಪ್ರಯಾಣಿಸುವ ಇಲ್ಲಿನ ಸಾರ್ವಜನಿಕರಿಗೆ ಬಾರಿ ಅನಾನುಕೂಲ ಆಗಿದೆ. ರಸ್ತೆಯ ನಿರ್ಮಾಣ ಕಾರ್ಯದಲ್ಲಿ ಟೋಲ್ ಸಂಗ್ರಹಿಸುವುದನ್ನೆ ಪ್ರಧಾನವಾಗಿಸಿ ನಿರ್ಮಾಣವಾಗಿರುವಂತೆ ಭಾಸವಾಗುವ 207 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಸ್ಥಳೀಯ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಜೆಸಿಐ ಚಪ್ಪರಕಲ್ಲು ಚಂದನ ಘಟಕದ ಅಧ್ಯಕ್ಷ ಶಿವಾಜಿಗೌಡ ಆರೋಪಿಸಿದ್ದಾರೆ.

ಹೆದ್ದಾರಿಯ ಇಕ್ಕೆಲಗಳಲ್ಲಿ ಚರಂಡಿಯಲ್ಲಿ ಹರಿಯಬೇಕಿದ್ದ ಕೊಳಚೆ ನೀರು ಸರ್ವೀಸ್ ರಸ್ತೆಯಲ್ಲಿ ಶೇಖರಣೆಯಾಗಿ ಸಾರ್ವಜನಿಕರಿಗೆ ಬಹಳ ಅನಾನುಕೂಲ ತಂದೊಡ್ಡಿದೆ. ಮಳೆ ಪ್ರಾರಂಭದಿಂದಲೂ ಸರ್ವೀಸ್ ರಸ್ತೆಯಲ್ಲಿ ಗುಂಡಿ ಬಿದ್ದು ಅಪಘಾತಗಳು ಉಂಟಾಗುತ್ತಿವೆ. ಈ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿ ಕಳೆದ ಒಂದು ದಶಕಕ್ಕಿಂತಲೂ ಅಧಿಕವಾಗಿ ನಡೆಯುತ್ತಿದ್ದು ಇದರಿಂದ ಈ ಭಾಗದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಈಗ ಹೆದ್ದಾರಿ ನಿರ್ಮಾಣ ಕಾರ್ಯ ಮುಗಿಯುವ ಹಂತ ತಲುಪಿದರು ಸಮಸ್ಯೆಗಳು ಕಡಿಮೆಯಾಗುವ ಬದಲಿಗೆ ಹೆಚ್ಚಾಗಿದೆ ಕಾಮಗಾರಿಗಳು ಪೂರ್ಣಗೊಂಡು ವಾಹನಗಳ ಸಂಚಾರ ಆರಂಭವಾದರೂ‌ ಚರಂಡಿ ಕಾಮಗಾರಿಗಳು ವೈಜ್ಞಾನಿಕವಾಗಿ ಆಗಿಲ್ಲ ಸ್ಥಳೀಯ ಅಗತ್ಯಗಳನ್ನು ನಿರ್ಲಕ್ಷಿಸಿದ್ದಾರೆ ಸಂಬಂಧಪಟ್ಟವರು ಈ ಕೂಡಲೇ ಸ್ಥಳೀಯರ ಹಿತವನ್ನು ಗಮನದಲ್ಲಿಟ್ಟುಕೊಂಡು ಇದನ್ನು ಸರಿಪಡಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಹೋರಾಟದ ಹಾದಿ ಹಿಡಿಯಬೇಕಾತ್ತದೆ, ಎಂದು ಜೆಸಿಐ ಚಪ್ಪರಕಲ್ಲು ಚಂದನ ಘಟಕದ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *