ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆಡಳಿತಾವದಿಯನ್ನು ಕುಂಟೀತಗೊಳಿಸಿದರೆ ಬಾಂಗ್ಲಾದೇಶದಲ್ಲಿ ನಡೆದಂತೆ ಭಾರತದಲ್ಲೂ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಶಾಸಕ ಜಿ.ಎಸ್.ಪಾಟೀಲ್ ಎಚ್ಚರಿಕೆಯನ್ನ ನೀಡಿದ್ದಾರೆ.
ಈ ಹಿಂದೆ ಬಿಜೆಪಿ-ಜೆಡಿಎಸ್ ಪಕ್ಷಗಳ ದೋಷಾರೋಪದ ಪಟ್ಟಿಯನ್ನೇ ಸಲ್ಲಿಸಿದ್ದರೂ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ನಿರಾಕರಿಸಿದ್ದರು. ಆದರೆ ಪಕ್ಷದ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯನವರ ವಿರುದ್ದ ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಆಶ್ಚರ್ಯವನ್ನು ವ್ಯಕ್ತಪಡಿಸಿದರು.ಈ ಪ್ರಕರಣದ ಕುರಿತು ನಾವು ರಾಷ್ಟ್ರಪತಿಗಳನ್ನ ಭೇಟಿ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಪಾಟೀಲ್ ತಿಳಿಸಿದ್ದಾರೆ.