ಜಮ್ಮು ಮತ್ತು ಕಾಶ್ಮೀರದ ಕತ್ರಾದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಮುಂಭಾದಲ್ಲಿರುವ ಪಾದಾಚಾರಿಯ ಟ್ರ್ಯಾಕ್ ನ ಭೂಮಿ ಕುಸಿದಿರುವ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು ಮತ್ತೊಬ್ಬರು ಗಾಯಗೊಂಡಿರುವ. ಘಟನೆಯು ಇಂದು(ಸೋಮವಾರ) ನಡೆದಿದೆ ಎಂದು ತಿಳಿದುಬಂದಿದೆ.
ಈ ಘಟನೆಯ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು, ವೀಡಿಯೋದಲ್ಲಿ ವೈಷ್ಣೋ ದೇವಿ ದೇವಸ್ಥಾನದ ಮುಂಭಾಗದಲ್ಲಿರುವ ಪಾದಚಾರಿ ರಸ್ತೆಯಲ್ಲಿ ಭೂಕುಸಿದು ಅವಶೇಷಗಳು ಬಿದ್ದಿರುವುದನ್ನು ಕಾಣಬಹುದಾಗಿದೆ.