ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪೋಟೊ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಮಾಡಲು ರಾಜ್ಯ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತಗೆ ಆದೇಶ ನೀಡಿರುವುದು ತಿಳಿದುಬಂದಿದೆ.
ಪ್ರಕರಣದ ಕುರಿತು ಸಮಗ್ರ ತನಿಖೆಯ ವರದಿಯನ್ನು ನೇರವಾಗಿ ಸರ್ಕಾರದ ಮುಂದೆ ಬಹಿರಂಗಪಡಿಸುವಂತೆ ಸೂಚಿಸಲಾಗಿದೆ. ಆ ಮೂಲಕ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳ ವ್ಯವಹಾರಗಳ ಬಗ್ಗೆ ಕಠಿಣ ಕ್ರಮವನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.
ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿರುವ ರೌಡಿಶೀಟರ್ಗಳ ಜೊತೆ ಹಾಯಾಗಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿದ ಫೋಟೋ ವೈರಲ್ ಆಗಿರುವುಲ್ಲದೇ, ಜೈಲಿನ ಹೊರಗಿರುವ ರೌಡಿಗಳ ಜೊತೆಯಲ್ಲೂ ಕೂಡಾ ವಿಡಿಯೋ ಕಾಲ್ನಲ್ಲಿ ಸಂಭಾಷಣೆ ನಡೆಸಿರುವುದು ಕೂಡ ಬೆಳಕಿಗೆ ಬಂದಿದೆ ಎನ್ನಲಾಗಿದೆ.