ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ಗುಂಪಿನ ವಿರುದ್ಧ ಪೊಲೀಸರು ಇಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಇವರು, ದರ್ಶನ್ ಮತ್ತು ಅವರ ಗುಂಪಿನ ವಿರುದ್ಧ ಪೊಲೀಸರು ಇಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ, ನಟ ದರ್ಶನ್ರನ್ನು A1 ಆರೋಪಿಯನ್ನಾಗಿ ಮಾಡುವುದು ತನಿಖಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟದ್ದು, ಈ ಮೂಲಕ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆಯಿದೆ. ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ಪಾತ್ರವನ್ನು ವಹಿಸುವುದಿಲ್ಲವೆಂದಿದ್ದಾರೆ.