ಕೊಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಮಂಡಿಸಿದೆ ಮಮತಾ ಬ್ಯಾನರ್ಜಿಯವರ ಸರ್ಕಾರ.

ಈ ಮಸೂದೆಯಲ್ಲಿ ಅತ್ಯಾಚಾರಕ್ಕೊಳಗಾದವರು ಮೃತಪಟ್ಟರೆ ಮರಣದಂಡನೆ ವಿಧಿಸಲು ಅವಕಾಶವಿದೆ, ಸಾಮೂಹಿಕ ಅತ್ಯಾಚಾರಿಗಳಿಗೆ ಫೆರೋಲ್‌ ನೀಡದೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಪ್ರಸ್ಥಾವನೆಯೂ ಇದೆ. ಮತ್ತು ಅತ್ಯಾಚಾರ ಲೈಂಗಿಕ ಅಪರಾದಗಳ ಶಿಕ್ಷೆಗಳನ್ನು ಪರಿಚಯಿಸಲಾಗಿದೆ.

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ನಡೆದ ಸುಮಾರು 1 ತಿಂಗಳ ನಂತರ ಪಶ್ಚಿಮ ಬಮಗಾಳ ಸರ್ಕಾರವೂ ಇಂದು ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ(ಕ್ರಿಮಿನಲ್‌ ಕಾನೂನುಗಳ ತಿದ್ದುಪಡಿ) ನ್ನು ವಿಧಾನಸಭೆಯಲ್ಲಿ ಮಂಡಿಸಿರುವುದು ತಿಳಿದುಬಂದಿದ್ದು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯ ಗುರಿಯನ್ನು ಹೊಂದಿದೆ.

Leave a Reply

Your email address will not be published. Required fields are marked *