ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಕೋರ್ಟ್ಗೆ 4000 ಪುಟಗಳ ಚಾರ್ಜ್ಶೀಟ್ನ್ನು ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ಇಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದ್ದು ಈ ಪ್ರಕರಣದಲ್ಲಿ A1 ಮತ್ತು A2 ಗಳಲ್ಲಿ ಬದಲಾವಣೆಯಾಗಬಹುದೆಂದು ಊಹಿಸಲಾಗಿತ್ತು. ಆದರೆ, ಹಾಗೇ ಆಗದೆ ಯಥಾಸ್ಥಿತಿ ಕಂಡುಕೊಂಡಿರುವುದ ದರ್ಶನ್ ಅಭಿಮಾನಿಗಳಿಗೆ ಬಿಗ್ ರಿಲೀಫ್ ತಂದುಕೊಟ್ಟಿದೆ ಎಂದರೆ ತಪ್ಪಾಗಲಾರದು.
ಕೋರ್ಟ್ಗೆ ಸಲ್ಲಿಸಲಾಗಿರುವ ಚಾರ್ಜ್ ಶೀಟ್ನಲ್ಲಿ ದರ್ಶನ್ A1 ಮತ್ತು ಪವಿತ್ರಾಗೌಡ A2 ಎಂದು ಬದಲಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿಯ ಬದಲಾವಣೆಯಾಗಿಲ್ಲ. ಎಸಿಪಿ ಚಂದನ್ ಕುಮಾರ್ ಮತ್ತು ತನಿಖಾ ತಂಡ ದರ್ಶನ್ ರನ್ನು ಎರಡನೇ ಆರೋಪಿಯಾಗಿಯೇ ಉಲ್ಲೇಖ ಮಾಡಿದ್ದಾರೆ.