ಉಡುಪಿ: ಸಿಎಂ ಸಿದ್ದರಾಮಯ್ಯನವರ ಪ್ರತಿಕೃತಿಗೆ ಚಪ್ಪಲಿ ಏಟು ಮತ್ತುಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಜನ ಬಿಜೆಪಿ ಮುಖಂಡರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕುಂದಾಪುರ ಕಾಲೇಜಿನ ಪ್ರಾಂಶುಪಾಲರಿಗೆ ರಾಜ್ಯ ಪ್ರಶಸ್ತಿ ತಡೆ ಹಿಡಿದ ವಿಚಾರವಾಗಿ ಆಕ್ಷೇಪವನ್ನು ವ್ಯಕ್ತಪಡಿಸಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಪ್ರತಿಭಟನೆಯನ್ನ ನಡೆಸಿದ್ದಾರೆ. ಆ ಸಮಯದಲ್ಲಿ ರಸ್ತೆಗಳನ್ನು ಬಂದ್ ಮಾಡಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಲ್ಲದೆ ಬೆಂಕಿ ಹಚ್ಚಿ ಹಿಂದೂ ವಿರೋಧಿ ಸಿದ್ದರಾಮಯ್ಯನನ್ನು ತೊಲಗಿಸಿ ಎಂಬ ಘೋಷಣೆಯನ್ನು ಕೂಗಿದ್ದಾರೆ
ಪ್ರತಿಭಟನೆಯ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಪೃಥ್ವಿರಾಜ್ ಶೆಟ್ಟಿ .ವಿಜಯ್ ಕೊಡವೂರು,ಸೇರಿದಂತೆ 11 ಜನರ ವಿರುದ್ದ ಎನ್ ಎಸ್ ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ಮಾಡುವ ದುರುದ್ದೇಶದಿಂದ ಈ ಕೃತ್ಯವನ್ನ ಎಸೆಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.