ಬೆಂಗಳೂರು:ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಅದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು .ಸಿಎಂ ಸೀಟ್ ಖಾಲಿಯಿದ್ದರೆ ತಾನೇ ಅದರ ಬಗ್ಗೆ ಪ್ರಶ್ನೆಗಳು ಉದ್ಭವವಾಗುವುದು ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದೇ ರೀತಿ ಯಾವುದೇ ರೀತಿಯ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಆಧಿಕಾರಾವಧಿಯಲ್ಲಿ ನಡೆದಿರುವಂತಹ ಭ್ರಷ್ಟಾಚಾರ, ಹಗರಣಗಳ ತನಿಖೆ ನಡೆಸಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿಯನ್ನು ರಚಿಸಲಾಗುತ್ತದೆಂದು ತಿಳಿಸಿದ್ದಾರೆ.