ಕಲಬುರ್ಗಿ: ನಾಗಮಂಗಲದಲ್ಲಿ ಎರಡು ಕೋಮುಗಳ ನಡುವೆ ನಡೆದ ಘಟನೆಯ ಕುರಿತು ಕೂಲಂಕುಶವಾಗಿ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿಯ ನಂತರ ಹೆಚ್ಚಿನ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ನಡೆದಿರುವ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣವೆಂದಿದ್ದ ಹಿನ್ನೆಲೆ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಿ ಆ ಅಧಿಕಾರಿಗಳ ವಿರುದ್ದ ಕ್ರಮಗಳನ್ನು ಕೈಗೊಳ್ಳಲಾಗಿದೆ ಈ ಘಟನೆಯಲ್ಲಿ ಯಾರ ಯಾರ ಕೈವಾಡವಿದೆಯೆಂದು ತನಿಖೆಯಿಂದ ಬಹಿರಂಗವಾಗಲಿದೆ ಎಂದಿದ್ದಾರೆ.