ಕಲಬುರ್ಗಿ: ಬಿಪಿಎಲ್ ಕಾರ್ಡ್ ಇರುವವರಿಗೆ 5 ಕೆಜಿ ಅಕ್ಕಿಯನ್ನು ಕೊಟ್ಟು ಮತ್ತೈದು ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲಾಗುತ್ತಿತ್ತು, ಆದರೆ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಕಲ್ಬುರ್ಗಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವೂ ರಾಜ್ಯಕ್ಕೆ ಅಕ್ಕಿಯನ್ನು ನೀಡಲು ನಿರ್ಧಾರ ಮಾಡಿದ್ದು. ಬಿಪಿಎಲ್ ಫಲಾನುಭವಿಗಳಿಗೆ ಅತೀ ಶೀಘ್ರದಲ್ಲಿ ಹಣದ ಬದಲಾಗಿ ಅಕ್ಕಿಯನ್ನು ವಿತರಿಸಲಾಗುತ್ತದೆ ಎಂದಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಮುಂದುವರೆಸಲಿದ್ದು ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತದೆ.ಹೊಸ ಕಾರ್ಡುಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಿದ್ದು, ಸರ್ವರ್ ಸಮಸ್ಯೆಯಿರುವ ಕಾರಣದಿಂದಾಗಿ ಹೆಚ್ಚಿನ ಅರ್ಜಿಗಳನ್ನು ಪಾಸ್ ಮಾಡಲಾಗುತ್ತಿಲ್ಲ.ಸರ್ವರ್ ಸಮಸ್ಯೆಯನ್ನು ಬಗೆಹರಿಸಿ ಅರ್ಹರಿಗೆ ಕಾರ್ಡುಗಳನ್ನು ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.