ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ರವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.ಬಳ್ಳಾರಿ ಜೈಲಿನಲ್ಲಿರುವ ದರ್ಶನನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಗೆಳೆಯ ದನ್ವೀರ್ ಭೇಟಿ ನೀಡಿದ್ದಾರೆ.
ನಟ ದರ್ಶನ್ ಪತ್ನಿಯ ಜೊತೆ ಜಾಮೀನು, ಕಾನೂನು ಹೋರಾಟದ ಬಗ್ಗೆ ಮಾತುಕತೆ ನಡೆಸಿದ್ದಾರೆ.ದರ್ಶನ್ರನ್ನು ಭೇಟಿ ಮಾಡಿ ಮಾತನಾಡಿದ ನಂತರ ದನ್ವೀರ್ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.