ಬೆಂಗಳೂರು: ಜಾಮೀನಿನ ಮೇಲಿರುವ ಹೆಚ್.ಡಿ.ಕುಮಾರಸ್ವಾಮಿಯವರೇ ನೀವು ಮೊದಲು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯನವರು ತಿರುಗೇಟನ್ನು ನೀಡಿದ್ದಾರೆ.
ನೆನ್ನೆ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ. ಇವರ ರಾಜೀನಾಮೆಗೆ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ಮೋದಿ ಅವರೂ ರಾಜೀನಾಮೆ ನೀಡಬೇಕಾಗುತ್ತದೆ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.