ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲವೆಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಬಿಜೆಪಿಯವರು ಒತ್ತಾಯ ಮಾಡುತ್ತಿರವ ವಿಚಾರಕ್ಕೆ ಸಂಬಂಧಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಸಿದ್ದರಾಮಯ್ಯನವರು ಯಾವ್ದೆ ಕಾರಣಕ್ಕೂ ರಾಜೀನಾಮೆ ನೀಡೊದಿಲ್ಲ, ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದಿದ್ದಾರೆ.
ಬಿಜೆಪಿಯವರು ಬೇಕಂತಲೇ ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಯಡಿಯೂರಪ್ಪನವರ ಮೇಲೆ ಎಫ್‌ಐಆರ್ ಆಗಿಲ್ವಾ? ಬೇಲ್ ಮೇಲೆ ಅವರು ಹೊರಗಿಲ್ವಾ?ಬಿ.ವೈ.ವಿಜಯೇಂದ್ರ ಮೇಲೆ ಕೇಸ್ ಇಲ್ವಾ? ಅವರುಗಳು ಮೊದಲು ರಾಜೀನಾಮೆ ನೀಡಲಿ, ಯಾಕೆ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ? ಎಂದು ಪ್ರಶ್ನಿಸಿದ್ದಾರೆ.