ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ . ಏಕೆಂದರೆ ಅವರು ಎಷ್ಟೇ ಪ್ರಯತ್ನ ಮಾಡಿದರೂ ಮುಡಾ ಹಗರಣದ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸಾದ್ಯವಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಹಗರಣದಿಂದ, ಮುಡಾ ಹಗರಣದಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ.ಆದ್ದರಿಂದ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ.ಮುಡಾ ಹಗರಣದ ಪ್ರಕರಣದಿಂದ ಯಾವುದೇ ಕಾರಣಕ್ಕೂ ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಮೊದಲ ಪಾದಯಾತ್ರೆ ಯಶಸ್ವಿಯಾಗಿದ್ದು ಎರಡನೆಯ ಪಾದಯಾತ್ರೆಯ ವಿಷಯ ಇನ್ನೂ ಚರ್ಚೆಯಾಗಿಲ್ಲಎಂದಿದ್ದಾರೆ.