ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಮೇಲಿನ ಮುಡಾ ಹಗರಣದ ಆರೋಪವೂ ಹರಿಯಾಣ ಚುನಾವಣೆಯ ಮೇಲೆ ಹೆಚ್ಚು ಪರಿಣಾಮವನ್ನುಂಟು ಮಾಡಿದೆ ಎಂದು ಹಿರಿಯ ನಾಯಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಖ್ಯಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಕ್ತ ತನಿಖೆಯನ್ನು ಎದುರಿಸಬೇಕು ಎನ್ನುವ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದಿದ್ದಾರೆ. ಚುನಾವಣಾ ಪ್ರಚಾರದ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಡಾ ಹಗರಣದ ವಿಚಾರವನ್ನು ಜನರ ಮುಂದೆ ಹೆಚ್ಚೆಚ್ಚು ಪ್ರಸ್ತಾಪಿಸಿ, ಜನರು ನಮ್ಮ ಮೇಲೆ ವಿಶ್ವಾಸವನ್ನಿಡದಂತೆ ಮಾಡಿದ್ದಾರೆ. ಆದ್ದರಿಂದ ನಮಗೆ ಹಿನ್ನಡೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯವರು ಹರಿಯಾಣದ ಪ್ರತಿ ಹಳ್ಳಿ ಹಳ್ಳಿಗೆ ತೆರಳಿ ಕರ್ನಾಟಕದ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಯ ಕುರಿತು, ಮುಡಾ ಹಗರಣದ ಕುರಿತು ಪ್ರತಿದಿನವೂ ಪ್ರಚಾರದ ವೇಳೆಯಲ್ಲಿ ಈ ವಿಷಯವನ್ನೇ ತಮ್ಮ ಭಾಷಣಗಳಲ್ಲಿ ಪ್ರಸ್ಥಾಪಿಸುತ್ತಿರುವುದರಿಂದ ಕಾಂಗ್ರೆಸ್ಸಿಗೆ ಹಿನ್ನಡೆ ಆಗುತ್ತಿದೆ
ಎಂದು ಬೇಸರಗೊಂಡಿದ್ದಾರೆ.
ನಾನು ಸಿಎಂ ಸಿದ್ದರಾಮಯ್ಯರ ವಿಚಾರದಲ್ಲಿ ನಾನು ಅಂದು ಹೇಳಿದ ಮಾತಿನ ಮೇಲೆ ಇಂದೂ ನಿಂತಿದ್ದೇನೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆಯುಂಟಾದರೆ ನೋಟಿಸ್‌ನ್ನು ನೀಡುತ್ತಾರೆ. ಮೋದಿಯವರು ನಮ್ಮ ರಾಜ್ಯದ ಮುಡಾ ವಿಚಾರವನ್ನು ಜನರ ಮುಂದಿಟ್ಟಿರುವ ಕಾರಣದಿಂದ ನಮಗೆ ಹಿನ್ನಡೆಯಾಗುತ್ತಿದೆ ಎಂದು ಆಕ್ರೋಶವನ್ನು ಹೊರಹಾಕಿದ್ದು ನಾನು ರಾಜಕೀಯದಲ್ಲಿ ಸಕ್ರಿಯವಾಗಿಲ್ಲದಿದ್ದರೂ ಪಕ್ಷದ ಉಳಿವಿಗಾಗಿ ಹೋರಾಟ ಮಾಡುತ್ತೇನೆ ಎಂದಿದ್ದಾರೆ.