ನವದೆಹಲಿ: 239 ಮಂದಿ ಪ್ರಯಾಣಿಕರಿರುವ ಏರ್ ಇಂಡಿಯಾ ವಿಮಾನವೂ ಮುಂಬೈನಿಂದ ನ್ಯೂಯಾರ್ಕ್ಗೆ ತೆರಳುತ್ತಿರುವ ವೇಳೆಯಲ್ಲಿ ಬಾಂಬ್ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ.
ಜನರ ಭದ್ರತಾ ದೃಷ್ಟಿಯಿಂದ ಮಾರ್ಗವನ್ನು ಬದಲಾವಣೆ ಮಾಡಿ, ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವನ್ನು ಲ್ಯಾಂಡ್ ಮಾಡಲಾಗಿದ್ದು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಬಾಂಬ್ ಬೆದರಿಕೆ ಕುರಿತು ಹೆಚ್ಚಿನ ತಪಾಸಣೆಯನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.
ವಿಮಾನವನ್ನು ಸುರಕ್ಷಿತ ಸ್ಥಳದಲ್ಲಿ ಲ್ಯಾಂಡ್ ಮಾಡಲಾಗಿ, ಜನರ ರಕ್ಷಣೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.