ಬೆಂಗಳೂರು: ವಾಲ್ಮೀಕಿ ಅಭಿವೃದ್ದಿ ನಿಗಮದ ಆರೋಪದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬೇಲ್ ಸಿಕ್ಕಿದ್ದು ಸದ್ಯ ರಿಲೀಫ್ ಆಗಿದ್ದಾರೆ.
ಬೆಂಗಳೂರು ನಗರದ 82ನೇ ಸಿವಿಲ್ ಕೋರ್ಟ್ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತು ಬದ್ಧವಾದ ಬೇಲ್ ಮಂಜೂರು ಮಾಡಿ ಆದೇಶವನ್ನು ಹೊರಡಿಸಿದೆ ಎನ್ನಲಾಗಿದೆ.
ವಾಲ್ಮೀಕಿ ನಿಗಮದಲ್ಲಿ ಅಕ್ರಮವಾಗಿ ಹಣವನ್ನು ವರ್ಗಾಯಿಸಲಾಗಿದೆ , ಅವ್ಯವಹಾರವನ್ನು ನಡೆಸಿದ್ದಾರೆ ಎಂದು ಮೂರು ತಿಂಗಳ ಹಿಂದೆಯೇ ಲೋಕಾಯುಕ್ತ ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ವಾಲ್ಮೀಕಿನಿಗಮದ ಹಗರಣದಲ್ಲಿ ಬಂಧಿತನಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಕೋರ್ಟ್ ಷರತ್ತನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.