ಬೆಂಗಳೂರು: ಎಲ್ಲಾ ಶಾಲೆಗಳಲ್ಲಿಯೂ ವಾರಕ್ಕೆ ಒಂದು ಬಾರಿ ನಮ್ಮ ಸಾಮಾಜಿಕ ಕರ್ತವ್ಯಗಳ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಮೌಲ್ಯ ಶಿಕ್ಷಣದ ತರಗತಿಯನ್ನು ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.
ಮನುಷ್ಯರಾದ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯಶಿಕ್ಷಣ ತರಗತಿ ನಡೆಸಲಾಗುವುದ ಎಂದು ಶಾಲಾ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ತಿಳಿಸಿದ್ದಾರೆ.