ಬೆಂಗಳೂರು: ಸಿಎಂ ಸಿದ್ದರಾಮಯ್ಯನ ಸಮ್ಮುಖದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಕರ್ನಾಟಕ ಒಳಮೀಸಲಾತಿ ಜಾರಿ ಮಾಡಲು ಅನುಮತಿಯನ್ನು ನೀಡಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯನ ಸಮ್ಮುಖದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿಯನ್ನು ನೀಡಿದ್ದಾರೆ.
ಒಳಮೀಸಲಾತಿಯನ್ನು ಜಾರಿ ಮಾಡಲು ಆಯೋಗವನ್ನು ರಚನೆ ಮಾಡಲಾಗುತ್ತದೆ, ಇದನ್ನು ಹೈಕೋರ್ಟ್ ನಿವೃತ್ತ ನ್ಯಯಮೂರ್ತಿಗಳ ನೇತೃತ್ವದಲ್ಲಿ ರಚನೆ ಮಾಡಲಾಗಿದ್ದು ದತ್ತಾಂಶವನ್ನು ಸ್ವೀಕರಿಸಿದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದಿರುವ ಅವರು 3 ತಿಂಗಳಲ್ಲಿ ವರದಿಯನ್ನು ಸ್ಲಲಿಸಲು ಆಯೋಗಕ್ಕೆ ಸಚಿವರು ಸೂಚನೆಯನ್ನು ನೀಡಿದ್ದಾರೆ.
ಪರಿಶಿಷ್ಟ ಜಾತಿಸಮುದಾಯಕ್ಕೆ ಒಳಮೀಸಲಾತಿಯನ್ನು ನೀಡಲು ನಾನು ಬದ್ದನಾಗಿದ್ದೇನೆ.ಇದರ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ. ಈಗಾಗಲೇ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದರು.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರ ಜೊತೆಗೆ ಸಮುದಾಯದ ನಾಯಕರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.