ಬಿಜೆಪಿ ಪಕ್ಷದ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರರ ನಾಯಕತ್ವವನ್ನು ನಾನು ಒಪ್ಪುವುದಿಲ್ಲವೆಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನೇತೃತ್ವದಲ್ಲಿ ನಡೆಯುವ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು ಭಾಗಿಯಾಗುವುದಿಲ್ಲ.ನಮ್ಮ ಎನ್ಡಿಎ ಅಭ್ಯರ್ಥಿಗಳಿಗೆ ಒಳ್ಳೆಯದಾಗಲೀ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.
ಸಿಪಿ ಯೋಗೇಶ್ವರ್ ಒಳ್ಳೆಯವರು. ಈ ಪಕ್ಷದಲ್ಲಿ ಟಿಕೆಟ್ ಸಿಗದಿರುವ ಕಾರಣ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಅವರು ಅಲ್ಲಿ ಸೋಲುತ್ತಾರೋ ಗೆಲ್ತಾರೋ ಗೊತ್ತಿಲ್ಲ ಎಂದಿದ್ದಾರೆ.
ಮಹಾರಾಷ್ಟ್ರದ ಎಲೆಕ್ಷನ್ ಪ್ರಚಾರದ ನಾಯಕತ್ವ ಮಾಡುವಂತೆ ತಿಳಿಸಿದ್ದಾರೆ. ಆದರೆ ನನ್ನ ಬದಲಾಗಿ ನನ್ನ ಅಣ್ಣನಿಗೆ ಕೊಡುವಂತೆ ಹೇಳಿದ್ದೇನೆ. ಡಿಕೆಶಿವಕುಮಾರ್ ಪಾರ್ಟ್ಟೈಮ್ ನೀರಾವರಿ ಸಚಿವರಾಗಿದ್ದಾರೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚು ಮಹತ್ವವನ್ನು ನೀಡುತ್ತಾರೆ.ಶಿವಕುಮಾರ್ ಬದಲಾಗಿ ಪೂರ್ಣ ಪ್ರಮಾಣದ ನೀರಾವರಿ ಸಚಿವರನ್ನು ನೇಮಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.