ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯದ ತೀರ್ಪನ್ನು ನಮ್ಮ ಸರ್ಕಾರವು ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೋರ್ಟ್ ನೀಡಿರುವ ತೀರ್ಪನ್ನು ನಾನು ಪ್ರಶ್ನೆ ಮಾಡುವುದಿಲ್ಲ, ನ್ಯಾಯಾಲಯದ ತೀರ್ಪನ್ನು ನಮ್ಮ ಸರ್ಕಾರವು ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ನಟ ದರ್ಶನ್ ಬೆನ್ನಮೂಳೆ ಸಮಸ್ಯೆಯಿಂದ ಬಳಲುತ್ತಿದ್ದು ವೈದ್ಯರು ನೀಡಿರುವ ರಿಪೋರ್ಟ್ ಆಧಾರದ ಮೇಲೆ ನ್ಯಾಯಾಲಯವು 6 ವಾರಗಳವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.