ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕಂಠೀರವ ಕ್ರೀಡಾಂಗಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕನ್ನಡಾಂಬೆಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡಿದ್ದಾರೆ.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿದರು. ರಾಷ್ಟ್ರದ್ವಜ ಮತ್ತು ಕನ್ನಡ ಧ್ವಜವನು ನೇರವೆರಿಸಿದ್ದಾರೆ.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ರಾಜ್ಯದ್ಯಾಂತ ಶಾಲಾ ಮಕ್ಕಳು ಭಾಗವಹಿಸಿ ಕನ್ನಡ ಗೀತೆಗಳನ್ನು ಹಾಡುತ್ತಾ ನೃತ್ಯವನ್ನು ಮಾಡುವುದರ ಮೂಲಕ ಪ್ರೇಕ್ಷಕರ ಗಮನವನ್ನು ಸೆಳೆದಿದ್ದಾರೆ.
ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಬಂಗಾರಪ್ಪನವರು ಹಾಜರಾಗಿದ್ದರು.