ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವೂ ಹಲವು ರೀತಿಯ ತಿರುವುಗಳನ್ನು ಪಡೆದುಕೊಳ್ಳುತ್ತಲೇ ಇದೆ. ಇದೀಗ ಮೃತ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 1300 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಟ ದರ್ಶನ್ ಮತ್ತು ಸಂಗಡಿಗರು ಮಾಡಿದಂತಹ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಕ್ಕೆ ತನಿಕಾಧಿಕಾರಿ ಎಸಿಪಿ ಚಂದನ್ ಕುಮಾರ್ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಸುಮಾರು 1300 ಪುಟಗಳ ಚಾರ್ಜ್ಶೀಟಿನಲ್ಲಿ ಪ್ರಯೋಗಾಲಯದ ವರದಿಗಳು, ಕೆಲವು ಸಾಕ್ಷಿಗಳ ಹೇಳಿಕೆಗಳು, ಮೊಬೈಲಿನಿಂದ ರಿಟ್ರೀವ್ ಮಾಡಲಾದ 8 ಪೋಟೋಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿದೆ ಎನ್ನಲಾಗಿದೆ.