ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿರುವ ಸ್ಯಾಂಡಲ್ವುಡ್ ನಟಿ ರಮ್ಯಾ ಕಾನೂನು ಎನ್ನುವುದು ಎಲ್ಲರಿಗೂ ಒಂದೇ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯವೂ ಶಿಕೆಯನ್ನು ಪ್ರಕಟಿಸಿದ ಬೆನ್ನಲ್ಲೇ ನಟಿ ಪ್ರತಿಕ್ರಿಯಿಸಿದ್ದಾರೆ.
