ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪದಡಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಹುಲ್‌ ಗಾಂಧಿಯ ನಡೆಗೆ ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ.

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ.

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *