ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಇದೇ ವಿಚಾರವಾಗಿ ಸದನದಲ್ಲಿ ಗೃಹಸಚಿವರು ಉತ್ತರ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಗೃಹ ಸಚಿವರು ಈಗಾಗಲೇ ಸ್ಪೀಕರ್ ಯು.ಟಿ.ಖಾದರ್‌ರವರನ್ನು ಭೇಟಿ ಮಾಡಿ ಚರ್ಚೆಯನ್ನು ನಡೆಸಿದ್ದಾರೆ. ಧರ್ಮಸ್ಥಳ ಪ್ರಕರಣದ ವಿಚಾರದ ಕುರಿತು ಸದನದಲ್ಲಿ ಉತ್ತರ ನೀಡಲಿದ್ದಾರೆ. ಧರ್ಮಸ್ಥಳ ವಿರುದ್ದದ ಷಡ್ಯಂತ್ರವನ್ನು ಬಯಲು ಮಾಡಿ, ಮಾಸ್ಕ್‌ಧಾರಿಯ ಹೆಸರನ್ನು ತಿಳಿಸಬೇಕು, ಎಸ್,ಐ.ಟಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ವಿಪಕ್ಷ ನಾಯಕರು ಪಟ್ಟುಹಿಡಿದಿರುವ ಹಿನ್ನೆಲೆ ಗೃಹಸಚಿವ ಪರಮೇಶ್ವರ್ ಉತ್ತರ ನೀಡಲಿದ್ದಾರೆ ಎನ್ನಲಾಗುತ್ತಿದೆ.
