ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಮ್ಯಾ ರೀತಿಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷೀಯವರಿಗೂ ಕಿಡಿಗೇಡಿಗಳಿಂದ ಆಶ್ಲೀಲ ಕಮೆಂಟ್‌ ಮಾಡಿದವರ ವಿರುದ್ದ ದೂರನ್ನು ಸಲ್ಲಿಸಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ನಟ ದರ್ಶನ್‌ರವರ ಪತ್ನಿ ವಿಜಯಲಕ್ಷ್ಮೀ ದರ್ಶನ್‌ರವರ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮತ್ತು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿ ಅವರಿಗೆ ಮಾನಸಿಕ ಕಿರುಕುಳ ನೀಡುವುದಲ್ಲದೆ, ಸೋಷಿಯಲ್‌ ಮೀಡಿಯಾಗಳಲ್ಲಿ ಹೆಣ್ಣಿನ ಸ್ವಾಭಿಮಾನ ಮತ್ತು ಗೌರವಕ್ಕೆ ಧಕ್ಕೆ ಮಾಡುವಂತಹ ಪೋಸ್ಟ್‌ ಗಳನ್ನು ಮಾಡಿದವರ, ಮಾಡುವವರ ವಿರುದ್ಧ ಕ್ರಮವನ್ನು ಕೈಗೊಂಡು ನ್ಯಾಯ ಮತ್ತು ರಕ್ಷಣೆಯನ್ನು ನೀಡುವಣತೆ ಮನವಿಯನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *