ಬೆಂಗಳೂರು: ವಿದೇಶಿ ಬಂಡವಾಳ ಸ್ವೀಕಾರದಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿ ನಂ1 ಸ್ಥಾನಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿರುವುದು ಕಾಣಬಹುದು.

ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಪಟ್ಟಿಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದ್ದು, ₹50,107 ಕೋಟಿ ಬಂಡವಾಳ ರಾಜ್ಯಕ್ಕೆ ಹರಿದುಬಂದಿದೆ. ಕಳೆದ ಹಲವು ವರ್ಷಗಳಿಂದ ಮೊದಲ‌ ಸ್ಥಾನದಲ್ಲಿದ್ದ ಮಹಾರಾಷ್ಟ್ರವನ್ನು ಹಿಂದಿಕ್ಕಿ ರಾಜ್ಯ ಪ್ರಥಮ ಸ್ಥಾನ ತಲುಪಿದೆ. ಇದು ಕರ್ನಾಟಕದ ಬಗೆಗೆ ಅಂತಾರಾಷ್ಟ್ರೀಯ ಹೂಡಿಕೆದಾರರು ಹೊಂದಿರುವ ವಿಶ್ವಾಸ ಮತ್ತು ಭರವಸೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕದ ಈ‌ ಸಾಧನೆಗೆ ನಮ್ಮ ಸರ್ಕಾರದ ನೀತಿಗಳು ರಾಜ್ಯದಲ್ಲಿ ಹೂಡಿಕೆಸ್ನೇಹಿ ಪರಿಸರ ನಿರ್ಮಿಸಿರುವುದು ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ನೆನೆಯ ಬಯಸುತ್ತೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *