ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ವಿಚಾರದ ಪ್ರಕರಣದ ಆರೋಪಿ ಚೆನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶ ಮಾಡಿದೆ.

ಎಸ್‌ಐಟಿ ವಶಕ್ಕೆ ನೀಡಿದ ಆರೋಪಿಯ ಸಮಯ ಮುಗಿದಿರುವ ಹಿನ್ನೆಲೆ ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಮುಸುಕುಧಾರಿ ಚೆನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಧರ್ಮಸ್ಥಳದ ಮುಸುಕುಧಾರಿ, ಬುರುಡೆ ಚೆನ್ನಯ್ಯನಿಗೆ 14 ದಿನಗಳ ಕಾಲ ನ್ಯಾಯಂಗ ಬಂಧನವಾಗಿದ್ದು, ಅವರನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *