ಬೆಂಗಳೂರು: ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ತಪ್ಪು ಮಾಡಿದವರು ಯಾರೇ ಆದ್ರೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ವೇಳೆಯಲ್ಲಿ ಕಲ್ಲುತೂರಾಟ ಮತ್ತು ಗಲಭೆ, ಗಲಾಟೆಗಳಾಗಿವೆ. ಮಸೀದಿ ಸಮೀಪ ಮೆರವಣಿಗೆಯಾಗಬೇಕಾದರೆ ಕಲ್ಲುತೂರಾಟ ನಡೆದಿದೆ. ಕೆಲವರ ಗುಂಪು ಗಲಾಟೆಗೆ ಯತ್ನಿಸಿದೆ. ಆ ವೇಳೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮದ್ದೂರಿನ ಪ್ರಕರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ 21 ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪು ಮಾಡಿದವರು ಯಾರೇ ಆದರೂ ಅವರ ವಿರುದ್ಧ ಕ್ರಮವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಮದ್ದೂರಿಗೆ ಹೋಗುತ್ತಿದ್ದು, ಘಟನೆಯ ಕುರಿತು ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

Leave a Reply

Your email address will not be published. Required fields are marked *