ನವದೆಹಲಿ:15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ರವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿಭವನದಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರು ರಾಧಾಕೃಷ್ಣರವರಿಗೆ ಪ್ರಮಾಣವಚನವನ್ನು ಬೋಧಿಸಿದ್ದಾರೆ.
ಸಿ.ಪಿ.ರಾಧಾಕೃಷ್ಣನ್ರವರು ಪ್ರಮಾಣ ವಚನ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ವೆಂಕಯ್ಯ ನಾಯ್ಡು, ಜಗದೀಪ್ ಧನಕರ್, ಹಮೀದ್ ಅನ್ಸಾರಿ,ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು ಎನ್ನಲಾಗಿದೆ.
