ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂ ಸ್ವಾಧೀನ ಪರಿಹಾರ ನಿಗದಿಯನ್ನು ಜಾರಿ ಮಾಡಿ ರಾಜ್ಯ ಸರ್ಕಾರವೂ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದು ತಿಳಿದಬಂದಿದೆ.

ಸೆ.16ರಂದು ನಡೆದ ವಿಶೇಷ ಸಚಿವ ಸಂಪುಟದಲ್ಲಿ  ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಭೂ ಸ್ವಾಧೀನ ಪರಿಹಾರ ನಿಗದಿ ಮಾಡಿದೆ.ಒಣ ಭೂಮಿಗೆ ಎಕರೆಗೆ 30 ಲಕ್ಷ ಮತ್ತು ವ್ಯವಸಾಯ ಮಾಡುವ ಭೂಮಿಗೆ ಎಕರೆಗೆ 40 ಲಕ್ಷ ಪರಿಹಾರವನ್ನು ನಿಗದಿ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ದಾರವನ್ನು ಕೈಗೊಂಡಿದ್ದು, ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಹಾಗೂ ಸಚಿವ ಕೆ.ಜೆ, ಜಾರ್ಜ್‌ ಸೇರಿದಂತೆ ಮತ್ತಿತರು ಹಾಜರಾಗಿದ್ದರು.

Leave a Reply

Your email address will not be published. Required fields are marked *