ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದಗೌಡರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಲಕ್ಷಾಂತರ ರೂಗಳನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ.
ಡಿ.ವಿ.ಸದಾನಂದ ಗೌಡರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ದುಡ್ಡನ್ನು ದೋಚಿದ್ದಾರೆ. ಎಸ್.ಬಿ.ಐ, ಆಕ್ಸಿಸ್ ಬ್ಯಾಂಕ್ ಮತ್ತು ಹೆಚ್.ಡಿ.ಎಫ್.ಸಿ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿರುವ ಕಳ್ಳರು 3ಬ್ಯಾಂಕುಗಳಲ್ಲಿ ತಲಾ 1ಲಕ್ಷಗಳಂತೆ ಡ್ರಾ ಮಾಡಿದ್ದಾರೆ ಎನ್ನಲಾಗಿದೆ.
ಅಕೌಂಟ್ ಯುಪಿಐ ಐಡಿಯನ್ನು ಹ್ಯಾಕ್ ಮಾಡಿ ಹಣವನ್ನು ದೋಚಿದ್ದಾರೆ.ಈ ವಿಚಾರದ ಕುರಿತು ಡಿ.ವಿ.ಸದಾನಂದಗೌಡರು ಸೈಬರ್ ಕ್ರೈಂ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.
