ಮೈಸೂರು: ಅಕ್ಟೋಬರ್‌ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಹಬ್ಬದಂತೆ ಆಚರಿಸಲಾಗುತ್ತದೆ.ನಮ್ಮ ಪೂರ್ವಜರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅವರ ಬಲಿದಾನ ನಮಗೆ ಸದಾ ಆದರ್ಶವಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಗಾಂಧಿ ಜಯಂತಿಯನ್ನು ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧೀಜಿಯ ಪ್ರತಿಮೆಗೆ ಮಾಲೆಯನ್ನು ಅರ್ಪಣೆ ಮಾಡಿ ಪುಷ್ಪವನ್ನು ಅರ್ಚನೆ ಮಾಡಿದ ನಂತರ ಸುದ್ದಿಗಾರರ ಜೊತೆ  ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಇಂದು ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜನ್ಮದಿನ. ಶಾಸ್ತ್ರಿಯವರು ದೇಶ ಕಂಡ ಪ್ರಾಮಾಣಿಕ ಪ್ರಧಾನಿಯಾಗಿದ್ದರು ಎಂದು ಶಾಸ್ತ್ರಿಯವರನ್ನು ಮನಸ್ಪೂರ್ತಿಯಾಗಿ ಸ್ಮರಿಸಿದ್ದಾರೆ.‌

Leave a Reply

Your email address will not be published. Required fields are marked *