ಚಿಕ್ಕಬಳ್ಳಾಪುರ: ಸಿಎಂ ಬದಲಾವಣೆಯ ಚರ್ಚೆಗಳು ರಾಜಕೀಯ ವಲಯದಲ್ಲಿ ಪರ-ವಿರೋಧದ ಮಾತುಗಳು ಕೇಳಿಬರುತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ ಎಂಬ ಹೇಳಿಕೆಯನ್ನು ನೀಡಿರುವುದರ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆಯನ್ನು ನೀಡಿದ್ದು, ಸಿಎಂ ಸಿದ್ದರಾಮಯ್ಯನವರು ಹೇಳಿದ ಮಾತು ವೇದವಾಕ್ಯವಿದ್ದಂತೆ , ಅದರ ಬಗ್ಗೆ ನಾನು ಮಾತನಾಡುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ.ಅವರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
