ನವದೆಹಲಿ: ರಾಜ್ಯ ರಾಜಧಾನಿಯಿಂದ ಕನ್ಯಾಕುಮಾರಿಯವರೆಗೂ ಸೈಕಲ್‌ತುಳಿದುಕೊಂಡು ಹೋಗಿರುವ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ರವರ ಸಾಧನೆಗೆ ಪ್ರಧಾನಿ ಮೋದಿಯವರು ಶ್ಲಾಘನೆ ತಿಳಿಸಿದ್ದಾರೆ.
ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಶ್ರೀ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ. ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ.ʻಎಂದು ತಿಳಿಸಿದ್ದಾರೆ.
