ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL 2026ರ ಉದ್ಘಾಟನಾ ಪಂದ್ಯ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಐಪಿಎಲ್‌ನ ಸಂಪ್ರದಾಯದಂತೆ, ಕಳೆದ ಸೀಸನ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ತಂಡದ ತವರು ಮೈದಾನದಲ್ಲಿ ಮುಂದಿನ ಸೀಸನ್‌ನ ಮೊದಲ ಪಂದ್ಯ ನಡೆಯುತ್ತದೆ. IPL 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿರುವುದರಿಂದ, 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ.

ಕಳೆದ ವರ್ಷ 2025 ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಅಹಿತಕರ ಘಟನೆಗಳಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಗೆ ಅನುಮಾನವಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ ಕರ್ನಾಟಕ ಸರ್ಕಾರವು ಕೆಲವು ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಐಪಿಎಲ್ ಪಂದ್ಯಗಳನ್ನು ನಡೆಸಲು ಕೆಎಸ್‌ಸಿಎಗೆ ಅಧಿಕೃತ ಅನುಮತಿ ನೀಡಿದೆ.

ಉದ್ಘಾಟನಾ ಪಂದ್ಯದಲ್ಲಿ ಚಾಂಪಿಯನ್ ಆರ್‌ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ಅಥವಾ ಪಂಜಾಬ್ ಕಿಂಗ್ಸ್ತಂಡವನ್ನು ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಬಿಸಿಸಿಐ ಇನ್ನೂ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ ಎನ್ನಲಾಗಿದೆ.

ವರದಿಗಳ ಪ್ರಕಾರ, IPL 2026 ಮಾರ್ಚ್ 26, 2026 ರಿಂದ ಆರಂಭವಾಗಿ ಮೇ 31 ರವರೆಗೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *