ರಾಯಚೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳು ಒಬ್ಬರನ್ನು ಒಬ್ಬರು ತೆಗಳುತ್ತಾ ತಮ್ಮ ಪಕ್ಷದ ಗೆಲುವಿಗಾಗಿ ಹೇಳಿಕೆಗಳನ್ನು ನೀಡುವುದು ಸಾಮಾನ್ಯ.
ಈಗ ರಾಯಚೂರು ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಪಂಚರತ್ನ ರಥಯಾತ್ರೆ ನಡೆಸುತ್ತಿರುವ ಜೆಡಿಎಸ್ ವರಿಷ್ಟ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್-ಜೆಡಿಎಸ್, ನಡುವೆ ಮೈತ್ರಿ ಮಾಡಿಕೊಂಡಾಗ ನಾನು 100 ಕೋಟಿ ಕೊಟ್ಟಿದ್ದೆ, ಆದರೆ ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸಿಮರುʼ ಎಂದಿದ್ದಾರೆ.
ಮುಂದುವರೆದು ʼಸಿದ್ದರಾಮಯ್ಯನನ್ನು ನಾನು ಎಷ್ಟೋ ಬಾರಿ ಸುಳ್ಳಿನ ಸರದಾರ ಎಂದು ಹೇಳಿದ್ದೆ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿʼ ಎಂದು ಸಿದ್ದರಾಮಯ್ಯ ಅವರ ವಿರುದ್ದ ಕಿಡಿಕಾಡಿದ್ದಾರೆ.