ಮಾಜಿ ಮುಖ್ಯಮಂತ್ರಿ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರ ಲೆಟರ್ ಹೆಡ್ ಅನ್ನು ನಕಲಿಸಿ, ʼಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯʼ ಅವರ ಮಧ್ಯೆ ಇರುವ ಮನಸ್ತಾಪವನ್ನು ಪ್ರಸ್ತಾಪಿಸುತ್ತಾ, ಸ್ವತಃ ಸಿದ್ಧರಾಮಯ್ಯನವರೇ ರಾಷ್ಟ್ರೀಯ ಕಾಂಗ್ರೆಸ್‌ನ ವರಿಷ್ಠೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಂತೆ ರೂಪಿಸಲಾಗಿದ್ದು, ಅದು ವಾಟ್ಸಾಪ್ ಮೂಲಕ ಹರಿದಾಡುತ್ತಿದೆ.
ಇದರ ಕುತಂತ್ರವನ್ನರಿತ ಸಿದ್ದರಾಮಯ್ಯ ಅವರು ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ʼಈ ಪತ್ರಕ್ಕೂ ನನಗೂ ಸಂಬಂಧವಿಲ್ಲʼ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ಮತ್ತು ಈ ಕುರಿತು ಸಿದ್ಧರಾಮಯ್ಯ ಅವರು ಸ್ಪಷ್ಟನೆ ನೀಡಿ ಕೊಟ್ಟಿರುವ ಬರಹ ಈ ಕೆಳಗಿನಂತಿದೆ:
ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ.
ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ.
ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ.
ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ.
ಸಿದ್ದರಾಮಯ್ಯ
ಮಾನ್ಯ ವಿರೋಧ ಪಕ್ಷದ ನಾಯಕರು,
ಕರ್ನಾಟಕ ವಿಧಾನಸಭೆ
https://www.facebook.com/photo?fbid=748196700009538&set=a.537775857718291