ಬೆಂಗಳೂರು: ACP ಚಂದನ್ ಕುಮಾರ್‌ರವರು ಲೈಂಗಿಕ ದೌರ್ಜನ್ಯವನ್ನ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಜುಲೈ 26 ನೇ ತಾರೀಖಿನಂದು ರಾತ್ರಿ ಸುಮಾರು 9 ಗಂಟೆಗೆ ನನ್ನನ್ನು ಅರೆಸ್ಟ್ ಮಾಡಿ ಕಾಟನ್ ಪೇಟೆಯ ಪೊಲೀಸ್ ಸ್ಟೇಷನ್ನಿಗೆ ಕರೆದುಕೊಂಡು ಹೋಗಿ ಅವಮಾನವೀಯವಾಗಿ ನಡೆಸಿಕೊಂಡಿರುವುದಲ್ಲದೆ, ಕೆಟ್ಟ ಕೆಟ್ಟ ಮಾತುಗಳಿಂದ ನಿಂದಿಸಿ,. ನನ್ನನ್ನು ಬೆತ್ತಲೆಗೊಳಿಸಿ ಲೈಂಗಿಕ ಕಿರುಕುಳವನ್ನು ನೀಡಿ ಮಾನಸಿಕವಾಗಿ ಕುಗ್ಗುವಂತೆ ಮಾಡಿದ್ದಾರೆ ಎಂಬುದನ್ನು ದೂರಿನಲ್ಲಿ ದಾಖಲಿಸಿದ್ದಾರೆ.
ACP ಚಂದನ್ ಕುಮಾರ್ ಮತ್ತು ಇತರರ ವಿರುದ್ಧ ತನಿಖೆಯನ್ನು ನಡೆಸಿ, ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಆದೇಶಿಸಿ ಮಾನವ ಹಕ್ಕುಗಳ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದಾರೆ .ಒಂದು ತಿಂಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯನ್ನು ನಡೆಸಿ, ಸೂಕ್ತ ವರದಿಯನ್ನುನೀಡಬೇಕೆಂದು ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಸೂಚನೆಯನ್ನ ನೀಡಿದ್ದಾರೆ.