ಬೆಂಗಳೂರು: ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಂತೆ ಕರ್ನಾಕದ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಶೋಷಣೆಯ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿ ಕೊಡುವಂತೆ ಕೋರಿ ಪೈರ್ ಸಂಸ್ಥೆಯು ಸಿಎಂ ಸಿದ್ದರಾಮಯ್ಯನವರಿಗೆ ಮನವಿಯನ್ನು ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಮನವಿಯನ್ನು ಸಲ್ಲಿಸುವ ವೇಳೆ ಸಾಮಾಜಿಕ ಹೋರಾಟಗಾರ ನಟ ಚೇತನ್, ಶೃತಿ ಹರಿಹರನ್,ನೀತು,ಹಿರಿಯ ಪತ್ರಕರ್ತರಾದ ವಿಜಯಮ್ಮ ಕೂಡಾ ಇದ್ದರು. ಮಹಿಳಾ ಕಲಾವಿದರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿಕೊಡಬೇಕೆಂದು ಒತ್ತಾಯಿಸಲಾಯಿತು