ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ಗೆ ಬೆನ್ನುನೋವಿರುವ ಕಾರಣ ಸರ್ಜಿಕಲ್ ಚೇರ್ ನೀಡಲು ಒಪ್ಪಿಗೆಯನ್ನು ಸೂಚಿಸಿದೆ ಎನ್ನಲಾಗಿದೆ.
ಹಿಂದೊಮ್ಮೆ ದರ್ಶನ್ ಕೈ ಪ್ಯಾಕ್ಷರ್ ಕಾರಣದಿಂದ ಬೆನ್ನುಮೂಳೆ ಸಮಸ್ಯೆಯಿರುವುದರಿಂದ ಶೌಚಕ್ಕೆ ಸರ್ಜಿಕಲ್ ಚೇರ್ ಒದಗಿಸಿಕೊಡುವಂತೆ ಬಳ್ಳಾರಿ ಕೇಂದ್ರ ಕಾರಾಗೃಹದ ಅಧಿಕಾರಿಗಳು ದಾಖಲೆಗಳನ್ನು ನೀಡಿ ಮನವಿಯನ್ನು ಮಾಡಿದ್ದರು ಎನ್ನಲಾಗಿದೆ.
ದರ್ಶನ್ ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡಾ ಜೈಲಿನ ಅಧಿಕಾರಿಗಳಿಗೆ ದಾಖಲೆಗಳನ್ನು ನೀಡಿದ್ದಾರೆ.