ಬೆಂಗಳೂರು: ನಟ ದರ್ಶನ್ ಅರ್ಜಿ ವಿಚಾರಣೆಯನ್ನುಅಕ್ಟೋಬರ್ 22ಕ್ಕೆ ಹೈಕೋರ್ಟ್ ನಿಗದಿ ಮಾಡಿದೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಅವರರನ್ನೊಳಗೊಂಡ ಹೈಕೋರ್ಟಿನ ಏಕಸದಸ್ಯ ಪೀಠವೂ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಸದ್ಯ ಜೈಲಿನಲ್ಲಿರುವ ದರ್ಶನ್‌ಗೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವೂ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶವನ್ನು ಹೊರಡಿಸಿದ ನಂತರ ನಟ ದರ್ಶನ್ ಹೈಕೋರ್ಟಿನ ಮೊರೆ ಹೋಗಿದ್ದರು.ಇದೀಗ ಜಾಮೀನು ಅರ್ಜಿ ವಿಚಾರಣೆಯನ್ನು ಅ.22 ಕ್ಕೆ ನಿಗದಿಯಾಗಿದೆ